CET 2024 HallTicket Download. ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏಪ್ರಿಲ್ 18 19 20 ರಂದು ನಡೆಯಲಿರುವ CET ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದೆ .
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Kea) ಇಂದ ನಡೆಯಲಿರುವ ಸಿಇಟಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ, ಪರೀಕ್ಷೆ ಬರೆಯಲು ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಲಿಂಕನ್ನು ಬಿಡುಗಡೆ ಮಾಡಲಾಗಿದೆ. ಇದೇ ಏಪ್ರಿಲ್ 2024 ರ 18 19 20ನೇ ತಾರೀಕಿನಂದು ನಡೆಯಲಿರುವ ಸಿಇಟಿ ( CET 2024) ಪರೀಕ್ಷೆಗೆ ಪ್ರವೇಶ ಪತ್ರ (Hall ticket ) ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಲಾಗಿದೆ.
ದಿನಾಂಕ 18/04/ 2024 ಮತ್ತು19/04/2024 ನಡೆಸಲಾಗುವ ಸಿಇಟಿ 2024 ಪರೀಕ್ಷೆಗೆ ಹಾಗೂ20/04/2024 ರಂದು ನಡೆಸುವ ಕನ್ನಡ ಭಾಷಾ ಪರೀಕ್ಷೆಗೆ ಪ್ರವೇಶ ಪತ್ರವನ್ನು ದಿನಾಂಕ 03/04/2024 ರಂದು ಬಿಡುಗಡೆ ಮಾಡಲಾಗಿದೆ. ಸಿಇಟಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಡೌನ್ಲೋಡ್ ಮಾಡಿಕೊಳ್ಳ ಬಹುದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಸರಿಯಾದ ಲಿಂಕ್ ಗಳ ಮೂಲಕ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಿ. ಪ್ರವೇಶ ಪತ್ರವನ್ನು ಹೇಗೆ ಡೌನ್ಲೋಡ್ ಮಾಡಿಕೊಳ್ಳುವುದು ಎಂಬುದನ್ನು ಈ ಲೇಖನದ ಮುಂದಿನ ಭಾಗದಲ್ಲಿ ತಿಳಿಸಲಾಗಿದೆ.
CET 2024 HallTicket Download. ಮಾಡಿಕೊಳ್ಳುವುದು ಹೇಗೆ?.
CET 2024 HallTicket Download ಮಾಡಿಕೊಳ್ಳುವುದು ಹೇಗೆ ಎಂಬುದನ್ನು ತಿಳಿದುಕೊಳ್ಳೋಣ. ಇದೇ ತಿಂಗಳು 18 19 ಮತ್ತು 26ರಂದು ನಡೆಸಲ್ಲಿರುವ ಸಿಇಟಿ ಪರೀಕ್ಷೆಗೆ ಪ್ರವೇಶ ಪಡೆಯಲು ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಪರೀಕ್ಷೆ ಬರೆಯಲು ಇಚ್ಚಿಸುವ ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
ಪ್ರವೇಶ ಪತ್ರವನ್ನು ಹೇಗೆ ಡೌನ್ಲೋಡ್ ಮಾಡಿಕೊಳ್ಳಬೇಕು ಎಂಬುದನ್ನು ತಿಳಿಯೋಣ. ಮೊದಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ ಲಿಂಕ್ ಹೀಗಿದೆ.https://cetonline.karnataka.gov.in/kea/
ಈ ಅಧಿಕೃತ ಲಿಂಕ್ ಭೇಟಿ ನೀಡಿ. ಸಿಇಟಿ ಪರೀಕ್ಷೆಯ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳ ಬಹುದು. ಭೇಟಿ ನೀಡಿದ ನಂತರ ಸಿಟಿ 2024ರ ಪ್ರವೇಶ ಪತ್ರ ಡೌನ್ಲೋಡ್ ಲಿಂಕ್ ಕಾಣಿಸುತ್ತದೆ. ಆ ಲಿಂಕ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಂಖ್ಯೆ ಮತ್ತು ಅರ್ಜಿದಾರರ ಹೆಸರು ( ಮೊದಲ ಐದು ಅಕ್ಷರಗಳು. ಅಂದರೆ ನಿಮ್ಮ ಹೆಸರಿನ ಮೊದಲು ಬರುವ 5 ಲೆಟರ್ ಗಳು ). ಹಾಗೂ ಜನ್ಮ ದಿನಾಂಕವನ್ನು ನಮೂದಿಸಿ. ಸಿಇಟಿ 2024 ರ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳ ಬಹುದಾಗಿದೆ.
ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ ಗೆ ಸರಿಯಾದ ಲಿಂಕ್ ಗಳ ಮೂಲಕ ಭೇಟಿ ಮಾಡಬೇಕು. ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ನೀಡಿರುವ ಸೂಚನೆಗಳನ್ನು ಸರಿಯಾಗಿ ಓದಿಕೊಳ್ಳಬೇಕು ನಂತರ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳುವಾಗ ಪ್ರವೇಶ ಪತ್ರದ ಜೊತೆಗೆ ಅಭ್ಯರ್ಥಿಗಳಿಗೆ ನೀಡಿರುವ ಸೂಚನೆಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಹಾಗೂ ಮಾರ್ಗ ಸೂಚಿಗಳನ್ನು / ಕಾರ್ಯವಿಧಾನಗಳನ್ನು ತಪ್ಪದೇ ಅನುಸರಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತಿಳಿಸಿದೆ. ಪ್ರವೇಶ ಪತ್ರದಲ್ಲಿ ಮುದ್ರಿಸಿರುವ ಎಲ್ಲಾ ವಿವರಗಳನ್ನು ಪರಿಶೀಲಿಸಿ, ನಿಗದಿಪಡಿಸಿದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಸೂಚಿಸಲಾಗಿದೆ.
ಹೊರನಾಡು ಮತ್ತು ಗಡಿನಾಡು ಪ್ರದೇಶದ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ಬೆಂಗಳೂರು ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ಮಾತ್ರ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆದೇಶದಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳು ತಪ್ಪದೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಡಿಸಿರುವ ನೋಟಿಫಿಕೇಶನ್ ಅಥವಾ ಪತ್ರಿಕಾ ಪ್ರಕಟಣೆಯನ್ನು ಓದಿಕೊಳ್ಳಬೇಕು.
2024 ರ ಸಾಲಿನಲ್ಲಿ ಸಿಇಟಿ ಪರೀಕ್ಷೆಗೆ 3.38 ಲಕ್ಷ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಿದ್ದು, ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ. ಸೀ ಇದಿಯಾ ಸಾಮಾನ್ಯ ಪ್ರವೇಶ ಪರೀಕ್ಷೆಯು ಇದೇ ಏಪ್ರಿಲ್ 18 19 20 ರಂದು ನಡೆಯಲಿದೆ. ಸಿಇಟಿಯ ಕನ್ನಡ ಭಾಷಾ ಪರೀಕ್ಷೆಗೂ ಇದೇ ಪ್ರವೇಶ ಪತ್ರ ನೀಡಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತಿಳಿಸಿದೆ.
CET 2024 ಪ್ರವೇಶ ಪರೀಕ್ಷೆಯ ವೇಳಾಪಟ್ಟಿ ಹೀಗಿದೆ.
CET 2024 ರಲ್ಲಿ ಸುಮಾರು ಮೂರುವರೆ ಲಕ್ಷದಷ್ಟು ಅಭ್ಯರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದು, ಪರೀಕ್ಷೆ ಬರೆಯಲು ತಯಾರಿ ನಡೆಸಿಕೊಂಡಿರುತ್ತಾರೆ. ಕರ್ನಾಟಕದಲ್ಲಿ ಇಂಜಿನಿಯರಿಂಗ್ ಹಾಗೂ ಇತರೆ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಾಮಾನ್ಯ ಪರೀಕ್ಷೆಯನ್ನು ನಡೆಸುತ್ತದೆ. ಇದೇ ಏಪ್ರಿಲ್ 18 19 20 ರಂದು ಸೆಟ್ ಸಾಮಾನ್ಯ ಪ್ರವೇಶ ಪರೀಕ್ಷೆಯು ನಡೆಯಲಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ 2024ರ ಸಾಮಾನ್ಯ ಪ್ರವೇಶ ಪರೀಕ್ಷೆಯ ವೇಳಾಪಟ್ಟಿಯನ್ನು ಈ ಕೆಳಕಂಡಂತೆ ಪ್ರಕಟಿಸಿದೆ.
- ದಿನಾಂಕ 18/04/2024 : ಸಿಇಟಿ ಸಾಮಾನ್ಯ ಪರೀಕ್ಷೆಯ ವಿಷಯಗಳು ಹೀಗಿವೆ. ಬೆಳಿಗ್ಗೆ 10.30 ರಿಂದ ಜೀವಶಾಸ್ತ್ರ ಹಾಗೂ ಮಧ್ಯಾಹ್ನ 2.30 ರಿಂದ ಗಣಿತ ಪರೀಕ್ಷೆಯು ನಡೆಯಲಿದೆ.
- ದಿನಾಂಕ 19/04/2024 : ಸೆಟ್ ಸಾಮಾನ್ಯ ಪರೀಕ್ಷೆಯ ವಿಷಯಗಳು ಹೀಗಿವೆ.ಬೆಳಿಗ್ಗೆ 10.30 ರಿಂದ ಭೌತಶಾಸ್ತ್ರ ಹಾಗೂ ಮಧ್ಯಾಹ್ನ 2:30 ರಿಂದ ರಾಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ.
- ದಿನಾಂಕ 20 /04 /2024 : ಸಿಇಟಿ ಸಾಮಾನ್ಯ ಪರೀಕ್ಷೆಯ ವಿಷಯ ಕನ್ನಡ ಭಾಷೆ ಪರೀಕ್ಷೆ ನಡೆಯಲಿದೆ.
ಈ ವೇಳಾಪಟ್ಟಿಗೆ ಅನುಗುಣವಾಗಿ ಸಿಇಟಿ 2024ರ ಸಾಮಾನ್ಯ ಪ್ರವೇಶ ಪರೀಕ್ಷೆಯು ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತಿಳಿಸಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರತಿವರ್ಷದಂತೆ ಈ ವರ್ಷವೂ ಸಹ CET ಸಾಮಾನ್ಯ ಪರೀಕ್ಷೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ನಡೆಸಲು ತಯಾರಿ ಮಾಡಿಕೊಂಡಿದೆ. ಪ್ರವೇಶಾತಿ ಪಡೆಯುವ ಅಭ್ಯರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ CET 2024 ರ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಲಾಗಿದೆ.
ಸಿಇಟಿ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷೆಗೆ ನಿಗದಿಪಡಿಸಿದ ಸಮಯಕ್ಕಿಂತ 30 ನಿಮಿಷಗಳ ಮುಂಚೆ ಪರೀಕ್ಷಾ ಕೇಂದ್ರಕ್ಕೆ ಹೋಗಬೇಕು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಗೆ ನೀಡಲಾಗಿರುವ ಮಾರ್ಗಸೂಚಿಗಳನ್ನು ಸರಿಯಾದ ರೀತಿಯಲ್ಲಿ ಓದಿಕೊಂಡು, ಸರಿಯಾದ ಕ್ರಮದಲ್ಲಿ ಪರೀಕ್ಷೆ ಬರೆಯಲು ಸೂಚಿಸಲಾಗಿದೆ.
FAQs ಪ್ರಶ್ನೆಗಳು :
1. ನನ್ನ KCET ಪ್ರವೇಶ ಪತ್ರವನ್ನು ನಾನು ಹೇಗೆ ಪರಿಶೀಲಿಸಬಹುದು?.
ಮೊದಲಿಗೆ ನೀವು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳುವ ಲಿಂಕ್ ಅನ್ನು ಕ್ಲಿಕ್ ಮಾಡಿ. ನಂತರ ನೋಂದಣಿ ಸಂಖ್ಯೆ ಹಾಗೂ ನಿಮ್ಮ ಹೆಸರಿನ ಮೊದಲ ಐದು ಅಕ್ಷರ ಮತ್ತು ಜನ್ಮ ದಿನಾಂಕವನ್ನು ನೀಡಿ. ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಿ ಜೊತೆಗೆ ಮಾರ್ಗ ಸೂಚಿಗಳನ್ನು ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಿಕೊಳ್ಳಬಹುದು.
2.ನನ್ನ KCET ಪರೀಕ್ಷಾ ಕೇಂದ್ರವನ್ನು ಹೀಗೆ ತಿಳಿಯಬಹುದು?.
ನೀವು ಮೊದಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ, ಅಲ್ಲಿ ನಿಮಗೆ ಪರೀಕ್ಷಾ ಕೇಂದ್ರಗಳ ಪಟ್ಟಿ ಇರುವ ಲಿಂಕ್ ಕ್ಲಿಕ್ ಮಾಡಿ, ಪರೀಕ್ಷಾ ಕೇಂದ್ರಗಳ ಪಟ್ಟಿಯನ್ನು ನೀಡಲಾಗಿದೆ. ಅಲ್ಲಿ ನೀವು ನಿಮ್ಮ ಪರೀಕ್ಷಾ ಕೇಂದ್ರವನ್ನು ತಿಳಿದುಕೊಳ್ಳಬಹುದು.
3. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ ಲಿಂಕ್ ಯಾವುದು?.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ ಲಿಂಕ್ https://kea.kar.nic.in. ಗೆ ಭೇಟಿ ಮಾಡಬಹುದು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸಿಇಟಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಸರಿಯಾದ ಮಾರ್ಗ ಸೂಚಿಗಳನ್ನು ಅನುಸರಿಸಲು ಕೋರಿದೆ.