ಗಂಗಾ ಕಲ್ಯಾಣ ಯೋಜನೆ (Ganga kalyana yojane)ಅರ್ಜಿ ಸಲ್ಲಿಸುವ ವಿಧಾನ ಮತ್ತು ಪ್ರಯೋಜನಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.
ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಸಣ್ಣ ಪ್ರಮಾಣದ ರೈತರಿಗೆ ನೀರಾವರಿ ಸೌಲಭ್ಯವನ್ನು ಒದಗಿಸುವ ಯೋಜನೆಯಾಗಿದೆ. ಅಂದರೆ ಸಣ್ಣ ಪ್ರಮಾಣದ ಕೃಷಿಕರಿಗೆ ಬೋರ್ ವೆಲ್ ಅಥವಾ ಕೊಳವೆ ಬಾವಿಗಳನ್ನು ಕೊರೆಸಿ, ಪಂಪ್ ಗಳು ಮತ್ತು ವಿದ್ಯುತ್ ಸೌಕರ್ಯವನ್ನು ಒದಗಿಸುವ ಯೋಜನೆಯಾಗಿದೆ. ಮುಖ್ಯವಾಗಿ ಕೃಷಿ ಭೂಮಿಗೆ ನೀರಾವರಿ ಸೌಲಭ್ಯವನ್ನು ಒದಗಿಸುವುದು. ಗ್ರಾಮೀಣ ಪ್ರದೇಶದ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಸಮುದಾಯಗಳಿಗೆ, ಕೃಷಿಗೆ ಅನುಕೂಲವಾಗುವಂತೆ ನೀರಾವರಿ ಸೌಲಭ್ಯವನ್ನು ಒದಗಿಸುವ ಯೋಜನೆಯಾಗಿದೆ. ಈ ಯೋಜನೆಗೆ ಡಿ ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ವಿಶ್ವಕರ್ಮ ಅಭಿವೃದ್ಧಿ ನಿಗಮ, ಡಾಕ್ಟರ್ ಬಿಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಎಸ್ ಸಿ ಎಸ್ ಟಿ ಅಭಿವೃದ್ಧಿ ನಿಗಮ, ವಿಶ್ವಕರ್ಮ ಅಭಿವೃದ್ಧಿ ನಿಗಮಗಳು, ಪಲಾನುಭವಿಗಳನ್ನು ಆಯ್ಕೆ ಮಾಡುತ್ತಾರೆ. ಈ ಫಲಾನುಭವಿಗಳಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲಾಗುತ್ತದೆ. ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.
Ganga kalyana yojane : ಗಂಗಾ ಕಲ್ಯಾಣ ಯೋಜನೆ ಎಂದರೇನು?.
ಗಂಗಾ ಕಲ್ಯಾಣ ಯೋಜನೆ ಎಂದರೆ ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಸಣ್ಣ ಪ್ರಮಾಣದ ಕೃಷಿ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿರುವ ರೈತರಿಗೆ, ಕೃಷಿ ಚಟುವಟಿಕೆ ಗೋಸ್ಕರ ನೀರಾವರಿ ಸೌಲಭ್ಯವನ್ನು ಒದಗಿಸುವ ಯೋಜನೆಯಾಗಿದೆ. ಒಂದು ನೀರಾವರಿ ಸೌಲಭ್ಯವನ್ನು ಕಲ್ಪಿಸುವ ಯೋಜನೆಯಾಗಿದೆ.
ಗಂಗಾ ಕಲ್ಯಾಣ ಯೋಜನೆಗೆ ಫಲಾನುಭವಿಗಳನ್ನು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಗಳಿಂದ ಆಯ್ಕೆ ಮಾಡಲಾಗುತ್ತದೆ. ಅಭಿವೃದ್ಧಿ ನಿಗಮಗಳು ಸರಿಯಾದ ಫಲಾನುಭವಿಗಳನ್ನು ಆಯ್ಕೆ ಮಾಡುತ್ತಾರೆ. ಈ ಯೋಜನೆಗೆ ಆಯ್ಕೆಯಾದ ರೈತರಿಗೆ ಸರ್ಕಾರದಿಂದ ಉಚಿತವಾಗಿ ನೀರಾವರಿಗೋಸ್ಕರ ಬೋರ್ವೆಲ್ ಗಳನ್ನು ಕೊರೆಸಿ, ಪಂಪುಗಳು ಮತ್ತು ವಿದ್ಯುತ್ ಸಂಪರ್ಕವನ್ನು ಕಲ್ಪಿಸಲಾಗುತ್ತದೆ.
ಗಂಗಾ ಕಲ್ಯಾಣ ಯೋಜನೆಯನ್ನು 01 ಫೆಬ್ರವರಿ 1997 ರಲ್ಲಿ ಜಾರಿಗೆ ತರಲಾಯಿತು. ಈ ವರ್ಷದಿಂದ ಸಣ್ಣ ಮತ್ತು ಅತಿ ಸಣ್ಣ ರೈತರು ಈ ಯೋಜನೆಯ ಲಾಭವನ್ನು ಪಡೆದುಕೊಂಡು ಬಂದಿದ್ದಾರೆ. ಈ ಯೋಜನೆಯಿಂದ ಇದುವರೆಗೆ ಸುಮಾರು ಒಂದು ಲಕ್ಷಕ್ಕಿಂತ ಹೆಚ್ಚಿನ ಸಣ್ಣ ಮತ್ತು ಅತಿ ಸಣ್ಣ ರೈತರು ಸೌಲಭ್ಯವನ್ನು ಪಡೆದಿದ್ದಾರೆ.
Ganga kalyana yojane : ಗಂಗಾ ಕಲ್ಯಾಣ ಯೋಜನೆಗೆ ಯಾರು ಅರ್ಜಿಯನ್ನು ಸಲ್ಲಿಸಬಹುದು.
ಗಂಗಾ ಕಲ್ಯಾಣ ಯೋಜನೆಗೆ (Ganga kalyana yojane)ಯಾರು ಅರ್ಜಿಯನ್ನು ಸಲ್ಲಿಸಬಹುದು ಎಂಬುದನ್ನು ನೋಡೋಣ. ಈ ಯೋಜನೆಗೆ ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಸಣ್ಣ ಮತ್ತು ಅತಿ ಸಣ್ಣ ರೈತರು ಕೃಷಿ ಚಟುವಟಿಕೆಗಳಿಗಾಗಿ ಸಲ್ಲಿಸಬಹುದು.
- ಗ್ರಾಮೀಣ ಪ್ರದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರು.
- ಕನಿಷ್ಠ 18 ರಿಂದ 55 ವರ್ಷ ಒಳಗಿನ ರೈತರು.
- ಕರ್ನಾಟಕ ರಾಜ್ಯದ ಕಾಯಂ ನಿವಾಸಿಗಳಾಗಿರಬೇಕು.
- ರೈತರ ವಾರ್ಷಿಕ ಆದಾಯವು ಒಂದು ಲಕ್ಷಕ್ಕಿಂತ ಮೇಲಿರಬಾರದು.
- ಹಿಂದುಳಿದ ವರ್ಗಗಳಿಗೆ ಸೇರಿದ ರೈತರು.
- ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ರೈತರು.
- ಕನಿಷ್ಠ ಒಂದರಿಂದ ಐದು ಎಕರೆ ಕೃಷಿ ಭೂಮಿಯನ್ನು ಹೊಂದಿರುವ ರೈತರು.
- ಸಣ್ಣ ಪ್ರಮಾಣದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತರು.
ಈ ಮೇಲಿನ ಎಲ್ಲಾ ರೈತರು ಗಂಗಾ ಕಲ್ಯಾಣ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸುವ ರೈತರು, ಯಾವ ವರ್ಗಕ್ಕೆ ಸೇರಿರುತ್ತಾರೆ ಅದೇ ವರ್ಗದ ಅಭಿವೃದ್ಧಿ ನಿಗಮಕ್ಕೆ ಅರ್ಜಿಯನ್ನು ಸಲ್ಲಿಸಬೇಕು.
Ganga kalyana yojane : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು.
ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ರೈತರಿಗೆ ಈ ಕೆಳಗಿನ ದಾಖಲಾತಿಗಳು ಕಡ್ಡಾಯವಾಗಿ ಬೇಕು. ಹಾಗಾದರೆ ಯಾವ ಯಾವ ದಾಖಲೆಗಳು ಬೇಕು ಎಂಬುದನ್ನು ನೋಡೋಣ.
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
- ಆಧಾರ್ ಕಾರ್ಡ್.
- RTC.
- ಸಣ್ಣ ಮತ್ತು ಅತಿ ಸಣ್ಣ ರೈತರ ಪ್ರಮಾಣ ಪತ್ರ.
- ಬ್ಯಾಂಕ್ ಖಾತೆಯ ವಿವರಗಳು.
- ಇತ್ತೀಚಿಗೆನ ಭಾವಚಿತ್ರಗಳು.
- ಭೂ ಕಂದಾಯ ಪಾವತಿ ಮಾಡಿದ ಪುರಾವೆಗಳು.
- ಸ್ವಯಂ ಘೋಷಣ ಪ್ರಮಾಣ ಪತ್ರ.
ಈ ಮೇಲಿನ ಎಲ್ಲಾ ದಾಖಲೆಗಳನ್ನು ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತರು ಗಂಗಾ ಕಲ್ಯಾಣ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು.
Ganga kalyana yojane : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ.
ಗಂಗಾ ಕಲ್ಯಾಣ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು ಎಂಬುದನ್ನು ನೋಡೋಣ. ಅರ್ಜಿ ಸಲ್ಲಿಸುವ ವಿಧಾನವನ್ನು ನೋಡೋಣ. ಸರ್ಕಾರ ಈ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ಈ ವೆಬ್ಸೈಟ್ನ ಮೂಲಕ ಅರ್ಚನ ಸಲ್ಲಿಸಬಹುದು.
- ಮೊದಲಿಗೆ ಈ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
- ಮುಖಪುಟ ತೆರೆದ ನಂತರ ಗಂಗಾ ಕಲ್ಯಾಣ ಯೋಜನೆಯ ಅರ್ಜಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಬೇಕು.
- ನಂತರ ರೈತರ ಎಲ್ಲಾ ವೈಯಕ್ತಿಕ ವಿವರಗಳನ್ನು ಎಂಟ್ರಿ ಮಾಡಬೇಕು.
- ಆಧಾರ್ ಕಾರ್ಡ್, ಮೊಬೈಲ್ ನಂಬರ್ ಮತ್ತು ಬ್ಯಾಂಕ್ ಖಾತೆಯ ವಿವರವನ್ನು ಕಡ್ಡಾಯವಾಗಿ ಎಂಟ್ರಿ ಮಾಡಬೇಕು.
- ನಂತರ ಕೇಳಿರುವ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
- ನಂತರ ಅರ್ಜಿಯನ್ನು ಸಬ್ಮಿಟ್ ಮಾಡಬೇಕು.
ಹೀಗೆ ಸರ್ಕಾರದ ಗಂಗಾ ಕಲ್ಯಾಣ ಯೋಜನೆಗೆ ಅಧಿಕೃತ ವೆಬ್ಸೈಟ್ನ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಸಣ್ಣ ಮತ್ತು ಅತಿ ಸಣ್ಣ ರೈತರು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದು.
Ganga kalyana yojane : ಗಂಗಾ ಕಲ್ಯಾಣ ಯೋಜನೆಯ ಪ್ರಯೋಜನಗಳು.
ಗಂಗಾ ಕಲ್ಯಾಣ ಯೋಜನೆಯ ಪ್ರಯೋಜನಗಳ ಬಗ್ಗೆ ನೋಡೋಣ. ಈ ಯೋಜನೆಯ ಮುಖ್ಯ ಉದ್ದೇಶ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ, ಕೃಷಿ ಚಟುವಟಿಕೆ ಗೋಸ್ಕರ ನೀರಾವರಿ ಸೌಲಭ್ಯವನ್ನು ಒದಗಿಸುವುದಾಗಿದೆ. ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಸಣ್ಣ ಪ್ರಮಾಣದ ರೈತರಿಗೆ ನೀರಾವರಿ ಸೌಲಭ್ಯವನ್ನು ಒದಗಿಸುವುದಾಗಿದೆ.
- ಸಣ್ಣ ಮತ್ತು ಅತಿ ಸಣ್ಣ ರೈತರಿಗೆ, ಕೃಷಿ ಚಟುವಟಿಕೆಗೆ ನೀರಾವರಿ ಸೌಲಭ್ಯವನ್ನು ಒದಗಿಸುವುದು.
- ಸಣ್ಣ ಮತ್ತು ಅತಿ ಸಣ್ಣ ರೈತರ ಕೃಷಿ ಚಟುವಟಿಕೆಗೆ ಪ್ರೋತ್ಸಾಹ ನೀಡುವುದು.
- ಈ ಯೋಜನೆಯ ಮೂಲಕ ರೈತರು ಬೋರ್ ವೆಲ್, ಪಂಪ್ ಗಳು ಮತ್ತು ವಿದ್ಯುತ್ ಸೌಕರ್ಯವನ್ನು ಪಡೆಯುತ್ತಾರೆ.
- ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ನೀಡುವುದು.
- ವೈಯಕ್ತಿಕ ಬೋರ್ವೆಲ್ ಯೋಜನೆಗೆ ಆರ್ಥಿಕ ಸಹಾಯವನ್ನು ನೀಡುವುದು.
ಒಟ್ಟಾರೆಯಾಗಿ ಹೇಳುವುದಾದರೆ, ಗಂಗಾ ಕಲ್ಯಾಣ ಯೋಜನೆಯು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಒಂದು ಉತ್ತಮ ಯೋಜನೆಯಾಗಿದೆ. ತಮ್ಮ ಕೃಷಿ ಚಟುವಟಿಕೆಗಳಿಗೆ ನೀರಾವರಿ ಸೌಲಭ್ಯವನ್ನು ಪಡೆಯುವ ಒಂದು ಮಹತ್ವದ ಯೋಜನೆಯಾಗಿದೆ. ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಂಡ ರೈತರು ನಮ್ಮ ಜಮೀನಿನಲ್ಲಿ ಬೆಳೆಗಳನ್ನು ಬೆಳೆದು, ಆರ್ಥಿಕ ಮತ್ತು ಸಾಮಾಜಿಕವಾಗಿ ಅಭಿವೃದ್ಧಿ ಹೊಂದುತ್ತಾರೆ. ಸರ್ಕಾರದ ಯೋಜನೆಯು ಒಂದು ಉತ್ತಮ ಯೋಜನೆಯಾಗಿದೆ. ರೈತರಿಗೆ ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ನೀಡುವ ಒಂದು ಮಹತ್ವದ ಯೋಜನೆಯಾಗಿದೆ. ಈ ಯೋಜನೆಯ ಮುಖ್ಯ ಉದ್ದೇಶ ಕೃಷಿ ಭೂಮಿ ಗಳಿಗೆ ನೀರಾವರಿ ಸೌಲಭ್ಯವನ್ನು ಒದಗಿಸುವುದಾಗಿದೆ. ರೈತರ ಅಭಿವೃದ್ಧಿಗೆ ಪೂರಕವಾಗಿದೆ.