Tharak7star

KPSC Group C Requirments 2024

KPSC Group C Requirments 2024

ಕರ್ನಾಟಕ ಲೋಕಸೇವಾ ಆಯೋಗವು  KPSC Group C Requirments 2024  ಕೈಗಾರಿಕಾ ವಿಸ್ತರಣಾಧಿಕಾರಿ ಮತ್ತು ಗ್ರಂಥಪಾಲಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.

ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್  ಕೈಗಾರಿಕಾ ಇಲಾಖೆಯಲ್ಲಿ ಖಾಲಿ ಇರುವ ಕೈಗಾರಿಕಾ ವಿಸ್ತರಣಾಧಿಕಾರಿ  50 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಮತ್ತು ಸಾರ್ವಜನಿಕ ಗ್ರಂಥಾಲಯದಲ್ಲಿ ಖಾಲಿ ಇರುವ ಗ್ರಂಥಪಾಲಕರ ಹುದ್ದೆಗೆ ಅರ್ಜಿಯನ್ನು ಕರೆಯಲಾಗಿದೆ. ಅರ್ಜಿಯನ್ನು ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಈ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ  ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ಸೈಟ್ನ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಒಟ್ಟು 60 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು 28 ಮೇ 2024ರ ಒಳಗೆ ಅರ್ಜಿಯನ್ನು ಸಲ್ಲಿಸಬಹುದು. ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಸಂಬಂಧಿಸಿದಂತೆ ವಿಚಾರತೆಯನ್ನು ಹೊಂದಿರಬೇಕು. ಪಾರ್ಥಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಈ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು, ಅರ್ಜಿ ಸಲ್ಲಿಸುವ ವಿಧಾನ, ವಿದ್ಯಾರ್ಹತೆ, ವಯೋಮಿತಿ, ಬೇಕಾಗುವ ದಾಖಲೆಗಳು ಎಲ್ಲಾ ವಿವರಗಳನ್ನು ಈ ಲೇಖನದಲ್ಲಿ ನೀಡಲಾಗಿದೆ.

KPSC Group C Requirments 2024 : ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ.

KPSC Group C Requirments 2024
KPSC Group C Requirments 2024

ಕರ್ನಾಟಕ ಲೋಕಸೇವಾ ಆಯೋಗವು  (KPSC Group C Requirments 2024) ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ. ಈ ಇಲಾಖೆಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇದೆ ಎಂಬುದನ್ನು ನೋಡೋಣ. ಮತ್ತು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವ ವಿದ್ಯಾರ್ಹತೆ ಹೊಂದಿರಬೇಕು ಎಂಬುದನ್ನು ನೋಡೋಣ.

ಕೈಗಾರಿಕಾ ಇಲಾಖೆಯಲ್ಲಿ ಖಾಲಿ ಇರುವ ಕೈಗಾರಿಕಾ ವಿಸ್ತರಣಾಧಿಕಾರಿ 50 ಹುದ್ದೆಗಳು ಮತ್ತು ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಖಾಲಿ ಇರುವ ಗ್ರಂಥಪಾಲಕ 10  ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

  •  ಕೈಗಾರಿಕಾ ವಿಸ್ತರಣಾಧಿಕಾರಿ  : 50 ಹುದ್ದೆಗಳು.
  •  ಗ್ರಂಥಪಾಲಕರು  : 10 ಹುದ್ದೆಗಳು
  • ಒಟ್ಟು : 60 ಹುದ್ದೆಗಳು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ ಯಾವ ವಿದ್ಯಾರ್ಹತೆ  ಹೊಂದಿರಬೇಕು ಮತ್ತು ಗ್ರಂಥಪಾಲಕ ಹುದ್ದೆಗೆ ಯಾವ ವಿದ್ಯಾರ್ಹತೆ ಹೊಂದಿರಬೇಕು ಎಂಬುದನ್ನು ನೋಡೋಣ.

  1.  ಕೈಗಾರಿಕಾ ವಿಸ್ತರಣಾಧಿಕಾರಿಗಳು : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಜಿನಿಯರಿಂಗ್  ಪದವಿಯನ್ನು ಪಡೆದಿರಬೇಕು. ಅಥವಾ ವಿಜ್ಞಾನ ಮತ್ತು ವಾಣಿಜ್ಯ ವಿಷಯದಲ್ಲಿ ಪದವಿಯನ್ನು ಪಡೆದಿರಬೇಕು.
  2.  ಗ್ರಂಥಪಾಲಕರು :  ಸಾರ್ವಜನಿಕ ಗ್ರಂಥಾಲಯದಲ್ಲಿ ಖಾಲಿ ಇರುವಾ ಗ್ರಂಥಪಾಲಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅಧಿಕೃತ ವಿಶ್ವವಿದ್ಯಾನಿಲಯದಿಂದ  ಪದವಿಯನ್ನು ಪಡೆದಿರಬೇಕು.

ಹೀಗೆ ಈ ಮೇಲ್ಕಂಡ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಮೇಲಿನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಯನ್ನು ಪಡೆಯಲು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬಹುದು.

KPSC Group C Requirments 2024 : ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು.

ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ (KPSC Group C Requirments 2024) ಅರ್ಜಿಯನ್ನು ಕರೆದಿರುವ ಕೈಗಾರಿಕಾ ವಿಸ್ತರಣಾಧಿಕಾರಿ ಮತ್ತು ಗ್ರಂಥಪಾಲಕ  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ದಾಖಲೆಗಳನ್ನು ಹೊಂದಿರಬೇಕು.

  •  ಆಧಾರ್ ಕಾರ್ಡ್.
  •  ಮೊಬೈಲ್ ನಂಬರ್.
  •  ಈ ಮೈಲ್ ಐಡಿ.
  •  ಶೈಕ್ಷಣಿಕ ದಾಖಲೆಗಳು.
  •  ಆದಾಯ ಪ್ರಮಾಣ ಪತ್ರ.
  •  ಇತ್ತೀಚಿಗಿನ ಭಾವಚಿತ್ರಗಳು.
  •  ಚುನಾವಣಾ ಗುರುತಿನ ಚೀಟಿ.

ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಮೇಲಿನ ದಾಖಲೆಗಳನ್ನು ಹೊಂದಿರಬೇಕು. ಆಸಕ್ತಿಯುಳ್ಳ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಯನ್ನು ಪಡೆಯಲು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬಹುದು.

Important Massages : ಪ್ರತಿ ದಿನ ಟ್ರೆಂಡಿಂಗ್ ನ್ಯೂಸ್ ಮತ್ತು ಸರ್ಕಾರಿ ಯೋಜನೆಗಳು ಹಾಗೂ ಹೊಸ ಉದ್ಯೋಗದ ಬಗ್ಗೆ ಮಾಹಿತಿಯನ್ನು ಪಡೆಯಲು ದಯವಿಟ್ಟು ನಮ್ಮ “Tharak7star Whatsapp Group Join Now ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KPSC Group C Requirments 2024 : ಹುದ್ದೆಗಳಿಗೆ ಅರ್ಜಿ ಶುಲ್ಕ ಮತ್ತು ವೇತನದ ವಿವರ.

ಕರ್ನಾಟಕ ಲೋಕಸೇವಾ ಆಯೋಗವು ಕೈಗಾರಿಕಾ ಮತ್ತು ಗ್ರಂಥಾಲಯ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 60 ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಶುಲ್ಕದ ವಿವರ :

  1.  ಜನರಲ್ ಅಭ್ಯರ್ಥಿಗಳು 600 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು.
  2.  ಮಾಜಿ ಸೈನಿಕ ಅಭ್ಯರ್ಥಿಗಳು 50 ರೂಪಾಯಿಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕು.
  3. OBC ಅಭ್ಯರ್ಥಿಗಳು 300 ರೂಪಾಯಿಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕು.
  4. SC/ ST  ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಕೊನೆಯ ದಿನಾಂಕದ ಒಳಗೆ ಪಾವತಿಸಬೇಕು. ಆಸಕ್ತಿ ಇರುವ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ಮುಂಚಿತವಾಗಿ ಅರ್ಜಿಯನ್ನು ಸಲ್ಲಿಸಬೇಕು.

  •  ವೇತನದ ವಿವರ:
  •  ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗಳಿಗೆ 33.000 ದಿಂದ 62.000 ವೇತನ ನೀಡಲಾಗುವುದು.
  •  ಗ್ರಂಥಪಾಲಕ ಹುದ್ದೆಗಳಿಗೆ  37.000 ದಿಂದ 65.000 ವೇತನವನ್ನು ನೀಡಲಾಗುವುದು.

KPSC Group C Requirments 2024 : ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ.

ಕರ್ನಾಟಕ ಲೋಕಸೇವಾ ಆಯೋಗವು ಕೈಗಾರಿಕಾ ಮತ್ತು ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿಯನ್ನು  ಕರೆಯಲಾಗಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳು ಆನ್ಲೈನ್ ನ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಕೈಗಾರಿಕಾ ವಿಸ್ತರಣಾಧಿಕಾರಿ ಮತ್ತು ಗ್ರಂಥಪಾಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನವನ್ನು ನೋಡೋಣ.

  •  ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
  • KPSC group C Requirments 2024.
  •  ಮುಖಪುಟ ತೆರೆದ ನಂತರ ಗ್ರೂಪ್ ಸಿ ಹುದ್ದೆ  ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.
  •  ಹೊಸದಾಗಿ ನೋಂದಣಿ ಮಾಡುವ ಅಭ್ಯರ್ಥಿಗಳು ಮೊದಲಿಗೆ ಅವರ ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿಯಾ ಮೂಲಕ ಲಾಗಿನ್ ಮಾಡಬೇಕು.
  •  ಲಾಗಿನ್ ಐಡಿ ಮತ್ತು ಪಾಸ್ವರ್ಡ್ ಅನ್ನು ಸೇವ್ ಮಾಡಿಕೊಂಡಿರಬೇಕು.
  •  ನಂತರ ಅಭ್ಯರ್ಥಿಗಳು ಸಂಬಂಧಿಸಿದ ಹುದ್ದೆಯ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.
  •  ಅರ್ಜಿ ನಮೂನೆ ತೆರೆದ ನಂತರ, ಅಭ್ಯರ್ಥಿಗಳು ತಮ್ಮ ವೈಯಕ್ತಿಕ ವಿವರವನ್ನು ಎಂಟ್ರಿ ಮಾಡಬೇಕು.
  •  ನಂತರ ಶೈಕ್ಷಣಿಕ ವಿವರಗಳನ್ನು ಎಂಟ್ರಿ ಮಾಡಬೇಕು.
  •  ಎಲ್ಲಾ ವಿವರಗಳನ್ನು ಎಂಟ್ರಿ ಮಾಡಿದ ನಂತರ, ಒಮ್ಮೆ ಎಲ್ಲಾ ವಿವರಗಳನ್ನು ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಂಡು, ಅರ್ಜಿಯನ್ನು ಸಬ್ಮಿಟ್ ಮಾಡಬೇಕು.
  •  ನಂತರ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕು.
  •  ಅರ್ಜಿ ಶುಲ್ಕವನ್ನು ಪಾವತಿಸಿದ ನಂತರ ಅಭ್ಯರ್ಥಿಗಳು ಹೇಳಿರುವ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
  •  ನಂತರ ಕೊನೆಯದಾಗಿ ಅರ್ಜಿಯನ್ನು ಸಬ್ಮಿಟ್ ಮಾಡಬೇಕು.
  •  ನಂತರ ಅಭ್ಯರ್ಥಿಗಳು ಚಲಿಸಿದ ಅರ್ಜಿ ನಮೂನೆಯ ಪ್ರಿಂಟ್ ಔಟ್ ಅನ್ನು ತೆಗೆದುಕೊಳ್ಳಬೇಕು.

ಹೀಗೆ ಈ ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಯಾವುದೇ ರೀತಿಯ ತಾಂತ್ರಿಕ ತೊಂದರೆ ಉಂಟಾದಲ್ಲೇ ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬಹುದು. ಅಥವಾ ಕರ್ನಾಟಕ ಲೋಕಸೇವಾ ಆಯೋಗದ ಸಹಾಯವಾಣಿಗೆ ಕರೆ ಮಾಡಬಹುದು.

ವಿಶೇಷ ಸೂಚನೆ : “Tharak7star” ವೆಬ್ಸೈಟ್ ನಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಪ್ರಕಟಿಸುವುದಿಲ್ಲ. ಅಧಿಕೃತ, ಉಪಯುಕ್ತ ಮಾಹಿತಿಯನ್ನು ಮಾತ್ರ ಪ್ರಕಟಿಸಲಾಗುವುದು. ವಂದನೆಗಳು.

 

Leave a Reply

Your email address will not be published. Required fields are marked *