PDO Requirments 2024 : ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ಸರ್ಕಾರ ಗ್ರಾಮೀಣಾಭಿರುದ್ಧಿ ಮತ್ತು ಪಂಚಾಯಿತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ (PDO) ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹುದ್ದೆ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ.
ಈ ಲೇಖನದಲ್ಲಿ ನಾವು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಎಲ್ಲಾ ಮಾಹಿತಿ ತಿಳಿಯೋಣ. ಅರ್ಜಿ ಸಲ್ಲಿಸುವುದು ಹೇಗೆ?, ಎಲ್ಲಿ?, ಯಾವಾಗ?, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು ಇವೆಲ್ಲಾ ಮಾಹಿತಿಯನ್ನು ತಿಳಿಯೋಣ.
ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ (KPSC) ಮೂಲಕ ಗ್ರಾಮೀಣಾಭಿರುದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗೆ ಅರ್ಜಿ ಕೆರೆದಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಇದೇ ಏಪ್ರಿಲ್ 15 ನೇ ತಾರೀಕಿನಿಂದ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
Table of Contents
TogglePDO Requirments 2024 : ಅರ್ಜಿ ಸಲ್ಲಿಸುವುದು ಹೇಗೆ?.
PDO Requirments 2024 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. KPSC ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ನ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿಗಳನ್ನು ಸಲ್ಲಿಸಿ. ಅಧಿಕೃತ ವೆಬ್ಸೈಟ್ ವಿಳಾಸ https://www.kpsc.kar.nic.in ಆಗಿದೆ. ಅರ್ಜಿಗಳನ್ನು ಏಪ್ರಿಲ್ 15 ರಿಂದ ಸಲ್ಲಿಸಬಹುದು.
ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ( KPSC) ಮೂಲಕ ಗ್ರಾಮೀಣಾಭಿರುದ್ಧಿ ಮತ್ತು ಪಂಚಾಯಿತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸಬಹುದು.ಆಸಕ್ತಿಯುಳ್ಳ ಅಭ್ಯರ್ಥಿಗಳು 15 ರಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಯನ್ನು ಪಡೆಯಲು KPSC ಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಬಹುದು. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಸರಿಯಾಗಿ ಅಧಿಸೂಚನೆ ಓದಿ ಅರ್ಜಿಗಳನ್ನು ಸಲ್ಲಿಸಿ.
PDO Requirments 2024 ಪ್ರಮುಖ ದಿನಾಂಕಗಳು.
PDO Requirments 2024 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸಲು ಅಧಿಸೂಚನೆ ಹೊರಡಿಸಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳು ಈ ಕೆಳಗಿನ ದಿನಾಂಕದಿಂದ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
1.ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 15/04/2024.
2.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15/05/2024.
ಪರೀಕ್ಷೆ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು. ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ನ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ .
PDO Requirments 2024 ವಯೋಮಿತಿ ಮತ್ತು ವಿದ್ಯಾರ್ಹತೆ.
PDO Requirments 2024 ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ (KPSC) ಮೂಲಕ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸಲು ಈ ವಿದ್ಯಾರ್ಹತೆ ಮತ್ತು ವಯೋಮಿತಿ ಇದೆ.
PDO ಹುದ್ದೆಗೆ ಅರ್ಜಿಗಳನ್ನು ಸಲ್ಲಿಸಲು ವಿದ್ಯಾರ್ಹತೆ ಹೀಗಿದೆ. ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ನ PDO ಹುದ್ದೆಗೆ ಅರ್ಜಿಗಳನ್ನು ಸಲ್ಲಿಸಲು ಯಾವುದೇ ಅಂಗಿಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.
PDO ಹುದ್ದೆಗೆ ಅರ್ಜಿಗಳನ್ನು ಸಲ್ಲಿಸಲು ವಯೋಮಿತಿ ಹೀಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮೇಲಿರಬೇಕು.
1.ಸಾಮಾನ್ಯ ವರ್ಗದ ಅಭ್ಯರ್ಥಿಗಳು : 35 ವರ್ಷ.
2.ಹಿಂದುಳಿದ ವರ್ಗದ ಅಭ್ಯರ್ಥಿಗಳು 38 ವರ್ಷ.
3.SC/ST, ಪ್ರವರ್ಗ -1 ಅಭ್ಯರ್ಥಿಗಳು 40 ವರ್ಷ ವಯೋಮಿತಿ ಹೊಂದಿರಬೇಕು.
PDO Requirments 2024 ಅರ್ಜಿ ಶುಲ್ಕ ಎಷ್ಟು?.
PDO Requirtments 2024 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸಲು ಶುಲ್ಕ ವಿವರ ಹೀಗಿದೆ.
- ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ.600 ಅರ್ಜಿ ಶುಲ್ಕ ಭರಿಸಬೇಕು.
- ಹಿಂದುಳಿದ ವರ್ಗದ ಅಭ್ಯರ್ಥಿಗಳು ರೂ.300 ಅರ್ಜಿ ಶುಲ್ಕ ಭರಿಸಬೇಕು.
- ಮಾಜಿ ಸೈನಿಕ ಅಭ್ಯರ್ಥಿಗಳು ರೂ.50 ಅರ್ಜಿ ಶುಲ್ಕ ನೀಡಬೇಕು.
- SC/ST, ಪ್ರವರ್ಗ -1ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.