ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (ICAR Scholorship for SC/ST Students) ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ನೀಡಲಾಗುವುದು.
ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಮಾತ್ರ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು. ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಮತ್ತು ಕೃಷಿ ಸಂಶೋಧನೆ ಮತ್ತು ಶಿಕ್ಷಣ ಇಲಾಖೆ (DARE) ಇವೆರಡು ಇಲಾಖೆಗಳು ಸೇರಿ, ಸಮಾಜದಲ್ಲಿ ವಾಸಿಸುವ ಬಡತನ ಮತ್ತು ಆರ್ಥಿಕವಾಗಿ ಹಿಂದುಳಿದ ಹಾಗೂ ದುರ್ಬಲ ವರ್ಗದ ವಿದ್ಯಾರ್ಥಿಗಳಿಗೆ ಅನುಕೂಲ ಮಾಡುವ ದೃಷ್ಟಿಯಿಂದ ಈ ವಿದ್ಯಾರ್ಥಿ ವೇತನ ಯೋಜನೆಯನ್ನು ಜಾರಿಗೆ ತರಲಾಗಿದೆ. ಕೃಷಿ ವಿಶ್ವ ವಿದ್ಯಾನಿಲಯದ ಅಡಿಯಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ (ICAR Scholorship ) ನೀಡಲಾಗುವುದು. ಈ ಲೇಖನದಲ್ಲಿ ನಾವು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿ ಕೊಡುವ ದೃಷ್ಟಿಯಿಂದ, ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?., ಯಾವ ದಾಖಲೆಗಳು ಬೇಕು?, ಆಯ್ಕೆ ವಿಧಾನ,ಅರ್ಹತೆಗಳು ಮತ್ತು ಪ್ರಯೋಜನಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ.
ICAR Scholorship : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ.
ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಹಾಗೂ ಕೃಷಿ ಸಂಶೋಧನೆ ಮತ್ತು ಶಿಕ್ಷಣ ಇಲಾಖೆ (DARE) ಯಿಂದ ಈ ವಿದ್ಯಾರ್ಥಿವೇತನ ನೀಡಲಾಗುವುದು. ಇದು ಸಮಾಜದಲ್ಲಿ ವಾಸಿಸುವ ಬಡತನ ರೇಖೆಗಿಂತ ಕೆಳಗಿರುವ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ನೀಡುವ ಯೋಜನೆಯಾಗಿದೆ.
ಈ ವಿದ್ಯಾರ್ಥಿವೇತನವನ್ನು ಕೃಷಿ ವಿಶ್ವ ವಿದ್ಯಾನಿಲಯದ ಅಡಿಯಲ್ಲಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ನೀಡಲಾಗುವುದು. ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡುವ ಸಲುವಾಗಿ ಮತ್ತು ಸಮಾಜದಲ್ಲಿ ವಾಸಿಸುವ ದುರ್ಬಲ ವರ್ಗದ ವಿದ್ಯಾರ್ಥಿಗಳಿಗೆ ಪ್ರೊತ್ಸಹ ನೀಡುವ ಹಾಗೂ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಕೃಷಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಅಂದರೆ, ಬಿ.ಎಸ್ ಸ್ಸಿ (B. Sc ), ಎಂ.ಎಸ್. ಸ್ಸಿ (M. Sc ), ಹಾಗೂ ಅಗ್ರಿಕಲ್ಚರ್ ಗೆ ಸಂಬಂದಿಸಿದ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ನೀಡಲಾಗುವುದು. ಒಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಸಹಾಯವಾಗುವ ನಿಟ್ಟಿನಲ್ಲಿ ಯೋಜನೆಯನ್ನು ಜಾರಿಗೆ ತರಲಾಗಿದೆ.
ಹೆಚ್ಚಿನ ಮಾಹಿತಿಯನ್ನು ಪಡೆಯಲು ಭೇಟಿ ನೀಡಿ. ಭಾರತೀಯ ಕೃಷಿ ಸಂಶೋಧನಾ ಮಂಡಳಿ
ICAR Scholorship : ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕು?.
ICAR ವಿದ್ಯಾರ್ಥಿವೇತನ ಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಈ ಕೆಳಗಿನ ದಾಖಲೆಗಳನ್ನು ಹೊಂದಿರಬೇಕು. ಯಾವ ಯಾವ ದಾಖಲೆ ಇರಬೇಕು ಎಂಬುದನ್ನು ನೋಡೋಣ.
- ಆಧಾರ್ ಕಾರ್ಡ್.
- ಜಾತಿ ಪ್ರಮಾಣ ಪತ್ರ.
- ವಿದ್ಯಾರ್ಥಿಯ ಭಾವ ಚಿತ್ರ.
- ಬ್ಯಾಂಕ್ ಖಾತೆಯ ವಿವರ.
- ನಿವಾಸಿ ಪ್ರಮಾಣ ಪತ್ರ.
- ಶೈಕ್ಷಣಿಕ ಮಾಹಿತಿ. ಅಂದರೆ ದಾಖಲಾತಿ ಪ್ರವೇಶ ಪತ್ರ.
- ಅಂಕಪಟ್ಟಿಗಳು
ಹೀಗೆ ಈ ಮೇಲಿನ ಎಲ್ಲಾ ದಾಖಲೆಗಳನ್ನು ಹೊಂದಿರುವ ವಿದ್ಯಾರ್ಥಿಗಳು ಅರ್ಜಿಸಲ್ಲಿಸಬಹುದು.
Important Massages : ಪ್ರತಿ ದಿನ ಟ್ರೆಂಡಿಂಗ್ ನ್ಯೂಸ್ ಮತ್ತು ಸರ್ಕಾರಿ ಯೋಜನೆಗಳು ಹಾಗೂ ಹೊಸ ಉದ್ಯೋಗದ ಬಗ್ಗೆ ಮಾಹಿತಿಯನ್ನು ಪಡೆಯಲು ದಯವಿಟ್ಟು ನಮ್ಮ “Tharak7star Whatsapp Group Join Now” ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ICAR Scholorship : ಅರ್ಜಿ ಸಲ್ಲಿಸುವ ವಿಧಾನ.
ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ನೀಡುವ ದೃಷ್ಟಿಯಿಂದ ಈ ವಿದ್ಯಾರ್ಥಿ ವೇತನವನ್ನು ಜಾರಿಗೆ ತರಲಾಗಿದೆ. ಕೃಷಿ ಶಿಕ್ಷಣಕ್ಕೆ ಆದ್ಯತೆ ನೀಡುವ ದೃಷ್ಟಿಯಿಂದ ಮತ್ತು ಕೃಷಿ ಶಿಕ್ಷಣವನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ವಿದ್ಯಾರ್ಥಿ ವೇತನವನ್ನು ಜಾರಿಗೆ ತರಲಾಗಿದೆ.
ICAR ವಿದ್ಯಾರ್ಥಿವೇತನ ಪಡೆಯಲು ಅರ್ಜಿಗಳನ್ನು ಸಲ್ಲಿಸುವ ವಿಧಾನವನ್ನು ನೋಡೋಣ.
- ಸಂಬಂಧಪಟ್ಟ ಕಾಲೇಜಿನಲ್ಲಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
- ಶಿಕ್ಷಣ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಯ ಅಧಿಕೃತ ವೆಬ್ಸೈಟ್ನ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
ವಿಶ್ವವಿದ್ಯಾನಿಲಯದ ಬೇಡಿಕೆಯಾದಾರದ ಮೇಲೆ ವಿದ್ಯಾರ್ಥಿವೇತನವನ್ನು ನಿಗದಿ ಮಾಡಲಾಗುವುದು. ಒಟ್ಟಿನಲ್ಲಿ ಕೃಷಿ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ವಿದ್ಯಾರ್ಥಿ ವೇತನ ಯೋಜನೆಯನ್ನು ಜಾರಿಗೆ ತರಲಾಗಿದೆ.
ICAR Scholorship : ಅರ್ಹತೆ ಮತ್ತು ಪ್ರಯೋಜನಗಳು.
ಕೃಷಿ ಶಿಕ್ಷಣಕ್ಕೆ ಆದ್ಯತೆ ನೀಡುವ ದೃಷ್ಟಿಯಿಂದ ಈ ವಿದ್ಯಾರ್ಥಿ ವೇತನ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯ ಅರ್ಹತೆ ಮತ್ತು ಪ್ರಯೋಜನಗಳನ್ನು ನೋಡೋಣ.
ಅರ್ಹತೆಗಳು :
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು.
- ಕೃಷಿ ವಿಶ್ವವಿದ್ಯಾನಿಲಯದ ಅಡಿಯಲ್ಲಿ ಪದವಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳು.
- ಕೃಷಿ ಶಿಕ್ಷಣದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳು.
ಕಡ್ಡಾಯವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಸರ್ಕಾರದಿಂದ ಮಾನ್ಯತೆ ಪಡೆದ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
ಪ್ರಯೋಜನಗಳು :
- ಪ್ರತಿ ತಿಂಗಳು ಒಂದು ಸಾವಿರ ರೂ ನಂತೆ ವಿದ್ಯಾರ್ಥಿ ವೇತನ ನೀಡಲಾಗುವುದು.
- ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ.
- ಬೋಧನಾ ಶುಲ್ಕ, ಪಠ್ಯ ಪುಸ್ತಕಗಳ ಖರೀದಿ ಮತ್ತು ಸಮವಸ್ತ್ರದ ವೆಚ್ಚಕ್ಕೆ ರೂ.750. ನೀಡಲಾಗುವುದು.
ಭಾರತ ದೇಶದಲ್ಲಿ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ಉನ್ನತ ಜ್ಞಾನವನ್ನು ಪಡೆಯಲು ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ಈ ವಿದ್ಯಾರ್ಥಿ ವೇತನವನ್ನು ಜಾರಿಗೆ ತರಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ, ಉನ್ನತ ಶಿಕ್ಷಣವನ್ನು ಪಡೆಯಲು ಆರ್ಥಿಕ ಸಹಾಯ ನೀಡಲಾಗುವುದು.
ಭಾರತೀಯ ಕೃಷಿ ಸಂಶೋಧನಾ ಮಂಡಳಿ ಮತ್ತು ಕೃಷಿ ಸಂಶೋಧನೆ ಮತ್ತು ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಈ ವಿದ್ಯಾರ್ಥಿ ವೇತನ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರ ಮುಖ್ಯ ಉದ್ದೇಶ ಕೃಷಿ ಶಿಕ್ಷಣಕ್ಕೆ ಸಂಬಂಧಿಸಿದಂತೆ ಉನ್ನತ ಜ್ಞಾನವನ್ನು ಪಡೆಯಲು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವುದಾಗಿದೆ.
ವಿಶೇಷ ಸೂಚನೆ : “Tharak7star” ವೆಬ್ಸೈಟ್ ನಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಪ್ರಕಟಿಸುವುದಿಲ್ಲ. ಅಧಿಕೃತ, ಉಪಯುಕ್ತ ಮಾಹಿತಿಯನ್ನು ಮಾತ್ರ ಪ್ರಕಟಿಸಲಾಗುವುದು. ವಂದನೆಗಳು.