Tharak7star

SSLC Result Date 2024 : ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶ ದಿನಾಂಕ ಪ್ರಕಟ.

SSLC Result Date 2024

ಎಸ್ ಎಸ್ ಎಲ್ ಸಿ ಪರೀಕ್ಷಾ( SSLC Result Date 2024) ಪಲಿತಾಂಶದ ದಿನಾಂಕವನ್ನು ಪ್ರಕಟಿಸಲಾಗಿದೆ. ಚೆಕ್ ಮಾಡುವ ವೆಬ್ಸೈಟ್ ವಿಳಾಸ ಇಲ್ಲಿದೆ.

ಕರ್ನಾಟಕ ರಾಜ್ಯದಲ್ಲಿ 2023- 24 ನೇ ಸಾಲಿನಲ್ಲಿ ಸುಮಾರು ಎಂಟು ಲಕ್ಷದ 90,000 ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬರೆದಿದ್ದಾರೆ.ಪರೀಕ್ಷೆಯನ್ನು ಬರೆದಿರುವ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಮೌಲ್ಯಮಾಪನ ಮತ್ತು ಚುನಾವಣೆಯ ಹಿನ್ನೆಲೆಯಲ್ಲಿ ಫಲಿತಾಂಶವನ್ನು ಪ್ರಕಟಿಸುವುದು ಸ್ವಲ್ಪ ತಡವಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಿಸುವ ದಿನಾಂಕವನ್ನು ನಿಗದಿಪಡಿಸಿದೆ. 8 ಮೇ 2024 ಬಂದು ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ. ಈ ವಿಷಯವು ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯಾಗಿದೆ. ಮುಂದಿನ ವಿದ್ಯಾಭ್ಯಾಸಕ್ಕಾಗಿ ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಇದು ಸಂತೋಷದಾಯಕ ವಿಷಯವಾಗಿದೆ. ಈ ಲೇಖನದಲ್ಲಿ ನಾವು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಿಸುವ ದಿನಾಂಕ, ಫಲಿತಾಂಶವನ್ನು ಯಾವ ವೆಬ್ಸೈಟ್ನಲ್ಲಿ ಚೆಕ್ ಮಾಡಿಕೊಳ್ಳಬಹುದು. ಎಂಬ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು.

SSLC Result Date 2024 : ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶದ ದಿನಾಂಕ.

SSLC Result Date 2024
SSLC Result Date 2024

2023 24 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬರೆದು, ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ಗುಡ್ ನ್ಯೂಸ್ ನೀಡಿದೆ. ಫಲಿತಾಂಶವನ್ನು ಪ್ರಕಟಿಸುವ ದಿನಾಂಕವನ್ನು ಸೂಚಿಸಿದೆ. 8 ಮೇ 2024 ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಹೆಚ್ಚಾಗಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ವೀಕ್ಷಿಸಬಹುದು.

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷಾ (SSLC Result Date 2024 )  ಫಲಿತಾಂಶವನ್ನು  ವಿದ್ಯಾರ್ಥಿಗಳು ಅವರು ವ್ಯಾಸಾಂಗ ಮಾಡಿರುವ ಶಾಲೆಗಳಲ್ಲಿಯೂ ಸಹ ವೀಕ್ಷಿಸಬಹುದು. ನೋಟಿಸ್ ಬೋರ್ಡ್ ನಲ್ಲಿ ಪ್ರಕಟಿಸಲಾಗುವುದು. ಆನ್ಲೈನ್ ಮೂಲಕವೂ ಸಹ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಪರೀಕ್ಷಿಸಬಹುದು.

SSLC Result Date 2024 : ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶವನ್ನು ಚೆಕ್ ಮಾಡುವುದು ಹೇಗೆ?.

ಪರೀಕ್ಷಾ ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶವನ್ನು 08/05/2024 ರಂದು ವೀಕ್ಷಿಸಬಹುದು. ಪರೀಕ್ಷಾ ಫಲಿತಾಂಶವನ್ನು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ನ ಮೂಲಕ ಪ್ರಕಟಿಸಲಾಗುವುದು. ವಿದ್ಯಾರ್ಥಿಗಳು ಪರೀಕ್ಷಾ ಪಲಿತಾಂಶವನ್ನು ಹೇಗೆ ಚೆಕ್ ಮಾಡಿಕೊಳ್ಳಬಹುದು ಎಂಬುದನ್ನು ನೋಡೋಣ.  SSLC Result Date 2024    ಪರೀಕ್ಷಾ ಪಲಿತಾಂಶ ಪ್ರಕಟಗೊಳ್ಳುವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ಗಳು ಹೀಗಿವೆ. https://kseab.karnataka.gov.in/english ಮತ್ತು SSLC Result 

  •  ಮೊದಲಿಗೆ ವಿದ್ಯಾರ್ಥಿಗಳು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
  •  ನಂತರ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಫಲಿತಾಂಶ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.
  •  ನಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿರುವ ರಿಜಿಸ್ಟರ್ ನಂಬರನ್ನು ಎಂಟ್ರಿ ಮಾಡಬೇಕು.
  •  ನಂತರ ವಿದ್ಯಾರ್ಥಿಗಳು ಹೆಸರನ್ನು ಎಂಟ್ರಿ ಮಾಡಬೇಕು.
  •  ನಂತರ ಸಬ್ಮಿಟ್ ಮಾಡಬೇಕು.
  •  ನಂತರ ಫಲಿತಾಂಶವು ಪ್ರಕಟಗೊಳ್ಳುತ್ತದೆ. ವಿದ್ಯಾರ್ಥಿಗಳು ಅದನ್ನು ವೀಕ್ಷಿಸಬಹುದು.
  •  ಫಲಿತಾಂಶದ ಕಾಫಿಯನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಬಹುದು.

ಹೀಗೆ ವಿದ್ಯಾರ್ಥಿಗಳು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುವ ಮೂಲಕ ತಮ್ಮ ಎಸ್ ಎಸ್ ಎಲ್ ಸಿ ಪರೀಕ್ಷಾ ( SSLC Result Date 2024 )ಫಲಿತಾಂಶವನ್ನು ವೀಕ್ಷಿಸಬಹುದು. ಅಥವಾ ವಿದ್ಯಾರ್ಥಿಗಳು ತಮ್ಮ ಶಾಲೆಗೆ ಭೇಟಿ ನೀಡಿ ಫಲಿತಾಂಶವನ್ನು ನೋಡಿಕೊಳ್ಳಬಹುದು. ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಶುಭ ಹಾರೈಸೋಣ.

 

Leave a Reply

Your email address will not be published. Required fields are marked *