Who is eligible for vidyasiri scholarship. ವಿದ್ಯಾಸಿರಿ ವಿದ್ಯಾರ್ಥಿ ವೇತನ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ.
ಸರ್ಕಾರ ಜಾರಿಗೆ ತಂದಿರುವ ವಿದ್ಯಾಸಿರಿ ವಿದ್ಯಾರ್ಥಿ ವೇತನ ಯೋಜನೆ ಹಲವಾರು ವಿದ್ಯಾರ್ಥಿಗಳಿಗೆ, ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲು ಸಹಾಯವಾಗಿದೆ. ಅದರಲ್ಲೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಈ ಯೋಚನೆಯಿಂದ ತುಂಬಾ ಅನುಕೂಲವಾಗಿದೆ. ಸರ್ಕಾರಿ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಾತಿ ಸಿಗುತ್ತಿರುವ ವಿದ್ಯಾರ್ಥಿಗಳಿಗೆ ಯೋಜನೆಯಿಂದ ಅನುಕೂಲವಾಗಿದೆ. ಈ ಯೋಚನೆಯಿಂದ ಪ್ರತಿ ತಿಂಗಳು ರೂ.1500. ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿ ಸೌಲಭ್ಯಕ್ಕಾಗಿ ಹಣಕಾಸಿನ ನೆರವನ್ನು ನೀಡಲಾಗುವುದು. ಇದು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರಿಸಲು ಸಹಾಯವಾಗಿದೆ. ವಿದ್ಯಾಸಿರಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ರೂ.1500 ರಂತೆ, 10 ತಿಂಗಳವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು. ವಿದ್ಯಾಸಿರಿ ವಿದ್ಯಾರ್ಥಿ ವೇತನ ಯೋಜನೆಯಿಂದ ಪ್ರತಿಯೊಬ್ಬ ವಿದ್ಯಾರ್ಥಿಗೂ ವಾರ್ಷಿಕವಾಗಿ ಹದಿನೈದು ಸಾವಿರ ರೂಪಾಯಿಗಳ ಆರ್ಥಿಕ ಸಹಾಯ ಧನ ಸಿಗಲಿದೆ. ಇದನ್ನು ಪಡೆಯಲು ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಈ ಲೇಖನದಲ್ಲಿ ವಿದ್ಯಾಸಿರಿ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ, ಯಾರು ಅರ್ಜಿ ಸಲ್ಲಿಸಬಹುದು ಅರ್ಹತೆಗಳು, ಬೇಕಾಗಿರುವ ದಾಖಲಾತಿಗಳು ಹೀಗೆ ಈ ಯೋಜನೆಗೆ ಸಂಬಂಧಿಸಿ ದಂತೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ.
vidyasiri scholarship : ವಿದ್ಯಾಸಿರಿ ವಿದ್ಯಾರ್ಥಿ ವೇತನ ಯೋಜನೆ.
vidyasiri scholarship : ವಿದ್ಯಾಸಿರಿ ವಿದ್ಯಾರ್ಥಿ ವೇತನ ಯೋಜನೆಯು ವಿದ್ಯಾರ್ಥಿಗಳ ವಿದ್ಯಾಭ್ಯಾಸ ಗೋಸ್ಕರ ಸರ್ಕಾರ ತಂದಿರುವ ಒಂದು ಮಹತ್ವದ ಯೋಜನೆಯಾಗಿದೆ. ಇದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅತಿಹೆಚ್ಚಿನ ಅನುಕೂಲವಾಗಿದೆ. ಶೈಕ್ಷಣಿಕ ವರ್ಷದಲ್ಲಿ ಪ್ರತಿ ತಿಂಗಳು 1500 ರೂಪಾಯಿಯಂತೆ, ಶೈಕ್ಷಣಿಕ ವರ್ಷದಲ್ಲಿ, 10 ತಿಂಗಳುಗಳವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು.
ವಿದ್ಯಾಸಿರಿ ವಿದ್ಯಾರ್ಥಿ ವೇತನ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ 15 ಸಾವಿರ ರೂಪಾಯಿಗಳ ಆರ್ಥಿಕ ಸಹಾಯ ಧನ ಸಿಗಲಿದೆ. ಸರ್ಕಾರಿ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಸಿಗುದಿರುವ ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿ ಸೌಲಭ್ಯಕ್ಕಾಗಿ ಸರ್ಕಾರವು, ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ವಿದ್ಯಾಸಿರಿ ವಿದ್ಯಾರ್ಥಿ ವೇತನ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯ ಸೌಲಭ್ಯವನ್ನು ಪಡೆಯಲು ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಿ ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷದಲ್ಲಿ 15000 ಸಹಾಯಧನ ಸಿಗಲಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನವನ್ನು ನೋಡೋಣ.
Vidyasiri scholarship : ವಿದ್ಯಾಸಿರಿ ವಿದ್ಯಾರ್ಥಿವೇತನ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ.
Vidyasiri scholarship : ಶೈಕ್ಷಣಿಕ ವರ್ಷದಲ್ಲಿ ಹದಿನೈದು ಸಾವಿರ ರೂಪಾಯಿಗಳ ವಿದ್ಯಾರ್ಥಿ ವೇತನ ಪಡೆಯಲು ವಿದ್ಯಾರ್ಥಿಗಳು ವಿದ್ಯಾಸಿರಿ ವಿದ್ಯಾರ್ಥಿವೇತನ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನವನ್ನು ಈ ಕೆಳಗೆ ನೀಡಲಾಗಿದೆ.
- ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು, ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡನ್ನು ಲಿಂಕ್ ಮಾಡಿರಬೇಕು.
- ವಿದ್ಯಾಸಿರಿ ವಿದ್ಯಾರ್ಥಿವೇತನ ಯೋಜನೆಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಮೊದಲಿಗೆ ಸರ್ಕಾರದಿಂದ ನೀಡಿರುವ SSP ( ವಿದ್ಯಾರ್ಥಿವೇತನ ಪೋರ್ಟಲ್ ) ಗೆ ಭೇಟಿ ನೀಡಬೇಕು.
- ಅಧಿಕೃತ ವೆಬ್ಸೈಟ್ ಲಿಂಕ್
- ಅಧಿಕೃತ ನಿಂತ್ ಮೇಲೆ ಕ್ಲಿಕ್ ಮಾಡಿದ ಮೇಲೆ, ಮುಖಪುಟ ತೆರೆಯುತ್ತದೆ. ನಂತರ ನೋಂದಣಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಬೇಕು.
- ನೋಂದಣಿ ಅರ್ಜಿ ನಮೂನೆ ತೆರೆದ ನಂತರ ವಿದ್ಯಾರ್ಥಿಯು ಅವರ ಆಧಾರ್ ಸಂಖ್ಯೆ ಮತ್ತು ಹೆಸರು ನಮೂದಿಸಬೇಕು.
- ಅರ್ಜಿ ನಮೂನೆಯಲ್ಲಿ ಕೇಳಿರುವ ಶೈಕ್ಷಣಿಕ ಮತ್ತು ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಬೇಕು.
- ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ವಿವರ, ಶೈಕ್ಷಣಿಕ ವಿವರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹೀಗೆ ಕೇಳಿರುವ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು.
- ಸಂಪೂರ್ಣ ವಿವರಗಳನ್ನು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ತಂತ್ರಾಂಶದಲ್ಲಿ ಸಬ್ಮಿಟ್ ಮಾಡಬೇಕು.
- ಅರ್ಜಿ ಸಲ್ಲಿಕೆ ಪೂರ್ಣಗೊಂಡ ನಂತರ, ಸಲ್ಲಿಸಿರುವ ಅರ್ಜಿ ನಮೂನೆಯನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು.
- ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಸಲ್ಲಿಸಬೇಕು.
- ಅರ್ಜಿ ಸಲ್ಲಿಸಿದ ಅರ್ಜಿ ನಮೂನೆ ಮತ್ತು ಕೇಳಿರುವ ಎಲ್ಲಾ ದಾಖಲೆಗಳ ಹಾರ್ಡ್ ಕಾಫಿಗಳನ್ನು ಕಾಲೇಜಿನ ಪ್ರಾಂಶುಪಾಲರಿಗೆ ಸಲ್ಲಿಸಬೇಕು.
- ಪೋಷಕರಿಗೆ ಸಂಬಂಧಿಸಿದಂತೆ ಕೇಳಿರುವ ದಾಖಲೆಗಳನ್ನು ಸಹ ನೀಡಬೇಕು.
- ಸಲ್ಲಿಸಿರುವ ಎಲ್ಲಾ ಮಾಹಿತಿಗಳು ಸರಿಯಾಗಿದೆಯೇ ಎಂದು ಪರಿಶೀಲನೆ ಮಾಡಿದ ನಂತರ ಅರ್ಜಿ ನಮೂನೆ ಮತ್ತು ದಾಖಲೆಗಳನ್ನು ಸಂಬಂಧಪಟ್ಟ ಇಲಾಖೆಗೆ ಕಳಿಸಲಾಗುವುದು.
ಹೀಗೆ ಅರ್ಜಿಗಳನ್ನು ಸಲ್ಲಿಸಿದ ವಿದ್ಯಾರ್ಥಿಗಳು, ಕಾಲೇಜಿನ ಪ್ರಾಂಶುಪಾಲರು ಮತ್ತು ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಳ್ಳಲಾಗುವುದು. ಕಾಲೇಜಿನ ಪ್ರಾಂಶುಪಾಲರು ಸರಿಯಾಗಿರುವ ಎಲ್ಲ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗೆ ಕಳಿಸುತ್ತಾರೆ. ಸಂಬಂಧಪಟ್ಟ ಇಲಾಖೆಯಿಂದ ಅರ್ಜಿಗಳ ಪರಿಶೀಲನೆ ನಡೆದ ನಂತರ, ಆಯ್ಕೆಯಾದ ವಿದ್ಯಾರ್ಥಿಗಳಿಗೆ, ವಿದ್ಯಾಸಿರಿ ವಿದ್ಯಾರ್ಥಿ ವೇತನ ಯೋಜನೆಯಿಂದ ಆರ್ಥಿಕ ಸಹಾಯಧನವನ್ನು ನೀಡಲಾಗುವುದು.
Vidyasiri scholarship : ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅಗತ್ಯ ದಾಖಲಾತಿಗಳು.
ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಈ ಕೆಳಗಿನ ದಾಖಲಾತಿಗಳನ್ನು ಹೊಂದಿರಬೇಕು.
- ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡನ್ನು ಲಿಂಕ್ ಮಾಡಿರಬೇಕು.
- ಆಧಾರ್ ಕಾರ್ಡ್.
- ಬ್ಯಾಂಕ್ ಖಾತೆಯ ವಿವರ.
- ಆದಾಯ ಪ್ರಮಾಣ ಪತ್ರ.
- ಜಾತಿ ಪ್ರಮಾಣ ಪತ್ರ.
- ಶೈಕ್ಷಣಿಕ ವಿವರಗಳು: ಇಂದಿನ ವರ್ಷದ ಮಾರ್ಕ್ಸ್ಕಾ ರ್ಡ್ ಗಳು.
- ಇತ್ತೀಚಿಗನ ಭಾವಚಿತ್ರಗಳು.
- ನಿವಾಸಿ ದೃಢೀಕರಣ ಪತ್ರ.
ಹೀಗೆ ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಈ ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು.
Vidyasiri scholarship : ವಿದ್ಯಾಸಿರಿ ವಿದ್ಯಾರ್ಥಿವೇತನ ಯೋಜನೆಗೆ ಬೇಕಿರುವ ಅರ್ಹತಾ ಮಾನದಂಡಗಳು.
ವಿದ್ಯಾಸಿರಿ ವಿದ್ಯಾರ್ಥಿ ಯೋಜನೆಗೆ ಅರ್ಜಿ ಸಲ್ಲಿಸಲು ಮತ್ತು ವಿದ್ಯಾಸಿರಿ ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಗಳು ಕೆಲವು ಅರ್ಹತಾಮಾನದಂಡಗಳನ್ನು ಹೊಂದಿರಬೇಕು. ಯಾವ ಅರ್ಹತಾಮಾನದಂಡಗಳನ್ನು ಹೊಂದಿರಬೇಕು ಎಂಬುದನ್ನು ನೋಡೋಣ.
- ಭಾರತದ ನಾಗರಿಕರಾಗಿರಬೇಕು.
- ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
- ವಿದ್ಯಾರ್ಥಿಗಳು ಹಿಂದುಳಿದ ವರ್ಗಕ್ಕೆ ಸೇರಿರಬೇಕು.
- ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿರಬೇಕು.
- ವಿದ್ಯಾರ್ಥಿಯು ಯಾವುದೇ ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶಾತಿ ಪಡೆದಿರಬಾರದು.
- ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು, ಆಯಾ ವರ್ಗಗಳಿಗೆ ಸಂಬಂಧಿಸಿದಂತೆ ಸರ್ಕಾರ ನಿಗದಿಪಡಿಸಿದ ಮೊತ್ತಕ್ಕಿಂತ ಹೆಚ್ಚಿಗೆ ಇರಬಾರದು.
- ಜಾತಿ ಪ್ರಮಾಣ ಪತ್ರ ಹೊಂದಿರಬೇಕು.
- ಆದಾಯ ಪ್ರಮಾಣ ಪತ್ರ ಹೊಂದಿರಬೇಕು.
- ವಿದ್ಯಾರ್ಥಿಯ ಹಾಜರಾತಿಯೋ ಸೆವೆಂಟಿ ಫೈವ್ ಪರ್ಸೆಂಟ್ ಗಿಂತ ಹೆಚ್ಚಿಗೆ ಇರಬೇಕು.
- ವಿದ್ಯಾರ್ಥಿಯು ಗ್ರಾಮೀಣ ಪ್ರದೇಶದ ವಾಗಿರಬೇಕು. ಕನಿಷ್ಠ ಪಕ್ಷ ಐದರಿಂದ ಹೆಚ್ಚಿಗೆ ಕಿಲೋಮೀಟರ್ ದೂರದಿಂದ ಬರುವಂತವರಾಗಿರಬೇಕು.
ಹೀಗೆ ವಿದ್ಯಾಸಿರಿ ವಿದ್ಯಾರ್ಥಿ ವೇತನ ಯೋಚನೆಗೆ ಅರ್ಹರಾಗಲು ಈ ಮೇಲಿನ ಅರ್ಹತಾ ಮಾನದಂಡಗಳನ್ನು ಹೊಂದಿರಬೇಕು. ಈ ಮಾನದಂಡಗಳನ್ನು ಹೊಂದಿರುವ ವಿದ್ಯಾರ್ಥಿಗಳು ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುತ್ತಾರೆ. ಮತ್ತು ವಿದ್ಯಾರ್ಥಿ ವೇತನ ಪಡೆಯಲು ಆರಾಧನೆಯನ್ನು ಹೊಂದಿರುತ್ತಾರೆ.
Vidyasiri scholarship : ವಿದ್ಯಾಸಿರಿ ವಿದ್ಯಾರ್ಥಿ ವೇತನದ ಪ್ರಯೋಜನಗಳು.
ವಿದ್ಯಾಸಿರಿ ವಿದ್ಯಾರ್ಥಿ ವೇತನದಿಂದ ವಿದ್ಯಾರ್ಥಿಗಳಿಗೆ ಅನೇಕ ಪ್ರಯೋಜನಗಳು ದೊರೆಯುತ್ತವೆ. ಮುಖ್ಯವಾಗಿ ದೊರೆಯುವ ಪ್ರಯೋಜನಗಳನ್ನು ನೋಡೋಣ.
- ಊಟ ಮತ್ತು ವಸತಿ ಗೆ ಆರ್ಥಿಕ ನೆರವು.
- ಪ್ರತಿ ಶೈಕ್ಷಣಿಕ ವರ್ಷಕ್ಕೆ 15000 ಆರ್ಥಿಕ ಸಹಾಯಧನ.
- ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಬೆಂಬಲ.
- ಮೀಸಲಾತಿ ವರ್ಗಕ್ಕೆ ಬೆಂಬಲ.
- ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗಾವಣೆ.
- ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ನೆರವು.
- ಶೈಕ್ಷಣಿಕ ಕಾರ್ಯಕ್ಷಮತೆಯನ್ನು ಪ್ರೋತ್ಸಾಹಿಸುವುದು.
- ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಸಹಾಯ ಮಾಡುವುದು ಮತ್ತು ಆರ್ಥಿಕ ಹೊರೆಯನ್ನು ಕಡಿಮೆ ಮಾಡುವುದು.
ಹೀಗೆ ವಿದ್ಯಾಸಿರಿ ವಿದ್ಯಾರ್ಥಿ ವೇತನದಿಂದ, ಅನೇಕ ಜನ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಧನ ಸಿಕ್ಕಿದೆ. ಇದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ, ಅವರ ಶಿಕ್ಷಣಕ್ಕೆ ಆರ್ಥಿಕ ಸಹಾಯ ದೊರೆತಂತಾಗಿದೆ. ಉನ್ನತ ಶಿಕ್ಷಣ ಪಡೆಯಲು ಸಹಾಯ ಮಾಡಿದಂತಾಗಿದೆ.